ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ‘ಚೌಕಿದಾರ್’ ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ದೇಶದ ಚೌಕಿದಾರ್ ಎಂದು ಹೇಳಿಕೊಳ್ತೀರಿ. ಈಗ ನಮ್ಮ ರಾಜ್ಯದ ಶಾಸಕರನ್ನು ಹೊಟೇಲ್ ಕೋಣೆಗಳಲ್ಲಿ ಕೂಡಿ ಹಾಕಿ ಕಾಯುತ್ತಿರುವ ಚೌಕಿದಾರ್ ಆಗಿಬಿಟ್ಟಿರಲ್ಲಾ…ಛೆ… ಎಂದು ಟ್ವಿಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.