ಜನಾರ್ದನ ರೆಡ್ಡಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಸಿದ್ದರಾಮಯ್ಯ…

264
firstsuddi

ಬಳ್ಳಾರಿ: ಜನಾರ್ದನ ರೆಡ್ಡಿಯವರ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದು, ಸಿದ್ದರಾಮಯ್ಯನವರು ಅನ್ಯಾಯವಾಗಿ ತನ್ನನ್ನು ನಾಲ್ಕು ವರ್ಷ ಜೈಲಿಗೆ ಹಾಕಿಸಿದ್ದರು ಎಂದು ಕಣ್ಣೀರು ಹಾಕುತ್ತಿರುವ ಜನಾರ್ದನ ರೆಡ್ಡಿಯವರೇ ದಯವಿಟ್ಟು ನಿಮ್ಮ ಪಕ್ಷದ ಸಂಸದರೇ ಬರೆದಿದ್ದ ಈ ಪುಸ್ತಕ ಓದಿ. ಜೈಲಿಗೆ ಹೋಗುವ ಪಾಪ ಏನು ಮಾಡಿದ್ದೀರಿ ಎಂದು ಗೊತ್ತಾಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಬರೆದಿರುವ ಮೈನಿಂಗ್ ಮಾಫಿಯಾ ಪುಸ್ತಕದ ಮುಖಪುಟ ಟ್ಯಾಗ್ ಮಾಡಿದ್ದಾರೆ.