ಮಾಜಿ ಸಚಿವ ಖಾದರ್ ಅವರ ಹತ್ಯೆಗೆ ಸಂಘಟನೆಯಿಂದ ಸ್ಕೆಚ್…!

486
firstsuddi

ಬೆಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಆರೋಗ್ಯ ಸಚಿವ ಯುಟಿ ಖಾದರ್ ಅವರ ಹತ್ಯೆಗೆ ಮೂಲಭೂತವಾದಿ ಸಂಘಟನೆ ಸ್ಕೆಚ್ ರೂಪಿಸಿದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಮೈಸೂರು ಶಾಸಕ ತನ್ವೀರ್ ಸೇಠ್ ಅವರ ಹತ್ಯೆಗೆ ಸಂಚು ರೂಪಿಸಿದಂತೆ ಸಂಘಟನೆಯೊಂದು ಖಾದರ್ ಹತ್ಯೆಗೆ ಸ್ಕೆಚ್ ಹಾಕಿದೆ ಎಂದು ಗುಪ್ತಚರ ಇಲಾಖೆ ಸರ್ಕಾರಕ್ಕೆ ತಿಳಿಸಿದೆ. ಗುಪ್ತಚರ ಇಲಾಖೆ ಈ ವಿಚಾರ ತಿಳಿಸಿದ ಬೆನ್ನಲ್ಲೇ ಎಚ್ಚರಗೊಂಡ ಸರ್ಕಾರ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಖಾದರ್ ಅವರು, ನನಗೆ ಜೀವ ಬೆದರಿಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತ: ಗೃಹ ಸಚಿವರು ನನಗೆ ಕರೆ ಮಾಡಿ ಹೇಳಿ ಭದ್ರತೆ ಪಡೆಯುವಂತೆ ಹೇಳಿದ್ದಾರೆ. ಆದರೆ ಓರ್ವ ಪೋಲಿಸ್ ಸಿಬ್ಬಂದಿಯನ್ನು ಭದ್ರತೆ ನೀಡಲು ಸರ್ಕಾರ ಮುಂದಾಗಿದೆ. ಇಂತಹ ಕಾಟಾಚಾರದ ಭದ್ರತೆ ನನಗೆ ಬೇಡ ಅಂತ ನಾನು ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.