ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ.- ಹೆಚ್ ಡಿ ದೇವೇಗೌಡ…

346
firstsuddi

ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಸಿಎಂ ಕುಮಾರಸ್ವಾಮಿ ಅವರು 48 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದಾರೆ, ಇಷ್ಟು ದೊಡ್ಡ ಮೊತ್ತದ ಸಾಲ ಮನ್ನಾ ಮಾಡಿದಾಗ ರಾಜ್ಯದ ಅಭಿವೃದ್ಧಿ ಕುಂಠಿತವಾಗಬಾರದು, ಅದನ್ನು ಸರಿದೂಗಿಸಿಕೊಂಡು ಹೋಗಬೇಕು, ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಸಹಕಾರ ಪಡೆದು ಸಾಲಮನ್ನಾ ಮಾಡಿದ್ದಾರೆ.ಕಳೆದ ಮೂರು ತಿಂಗಳಿಂದ ಸಮ್ಮಿಶ್ರ ಸರ್ಕಾರ ಬೀಳಲಿದೆ ಎಂದು ಹಲವರು ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಣ್ಣಪುಟ್ಟ ಗೊಂದಲವಿದೆ. ಆದರೆ ಅದನ್ನು ಅವರೇ ಬಗೆಹರಿಸಿಕೊಳ್ಳಲಿದ್ದಾರೆ. ಸದ್ಯದಲ್ಲೇ ಸರ್ಕಾರ ಬೀಳಲಿದೆ ಎಂದು ಮುಹೂರ್ತ ದಿನಾಂಕ ಫಿಕ್ಸ್ ಮಾಡಿರುವವರಿಗೆ ನಿರಾಸೆ ಕಾದಿದೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು.