ಶಬರಿಮಲೆ ವಿಶೇಷ ಪೂಜೆ ಹಿನ್ನಲೆ ಸೆಕ್ಷನ್ 144 ಜಾರಿ…

300
firstsuddi

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಿನ್ನಲೆ ನವೆಂಬರ್ 5 ರಂದು ದೇವಾಲಯದ ಬಾಗಿಲು ತೆರೆಯಲಿದ್ದು , ಮುಂಜಾಗ್ರತಾ ಕ್ರಮವಾಗಿ ದೇಗುಲದ ಬಳಿ, ಪಂಪಾ, ನಿಲಕ್ಕಲ್,ಸನ್ನಿಧಾನಂ, ಹಾಗೂ ಎಲವುಂಕಾಲ್​​​​​ನಲ್ಲಿ ನವೆಂಬರ್ 4ರಿಂದ ನವೆಂಬರ್ 6ರ ವರೆಗೆ ಸೆಕ್ಷನ್ 144 ಜಾರಿಗೊಳಿಸಲು ಪಟ್ಟಣಂತಿಟ್ಟ ಜಿಲ್ಲಾಧಿಕಾರ ನಿರ್ಧರಿಸಿದ್ದಾರೆ. ಕಳೆದ ಬಾರಿ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆದಾಗ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು . ಈ ಹಿನ್ನಲೆ ಈ ಬಾರಿ  ಯಾವುದೇ ಅಹಿತಕರ ಘಟನೆ ನಡೆಯಂತೆ ತಡೆಯಲು ಶಬರಿಮಲೆ ಸುತ್ತಮುತ್ತ ಬಿಗಿ ಭದ್ರತೆಯನ್ನು ವಹಿಸಲು ಪೊಲೀಸ್ ಗೆ ಜಿಲ್ಲಾಡಳಿತ ಸೂಚಿಸಿದೆ.