ಚಿತ್ರದುರ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು ರಾವಣಾಸುರನ ಎಲ್ಲಾ ಗುಣಗಳು ಸಿದ್ದರಾಮಯ್ಯ ಬಳಿ ಇವೆ. ಸಿದ್ದರಾಮಯ್ಯ ಅವರಿಗೆ ಸಂಸ್ಕಾರವಿಲ್ಲ. ಹೆಣ್ಣು ಮಕ್ಕಳ ಬಗ್ಗೆ ಗೌರವವಿಲ್ಲ. ಹತ್ತಿರದಿಂದ ನೋಡಿದವರಿಗೆ ಅವರ ಗುಣ ಗೊತ್ತಿದೆ. ಅಧಿಕಾರಿಗಳ ವರ್ಗಾವಣೆ ಹೆಚ್ ಡಿ ಕುಮಾರಸ್ವಾಮಿ ಅವರ ಕುಟುಂಬದ ಹಿಡಿತದಲ್ಲಿದೆ ಎಂದು ಆರೋಪಿಸಿದರು. ಸಮ್ಮಿಶ್ರ ಸರ್ಕಾರದ ಶಾಸಕರು ಅಸಮಾಧಾನಗೊಂಡಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ಸಮ್ಮಿಶ್ರ ಸರ್ಕಾರ ಪತನವಾಗಬಹುದು ಎಂದಿದ್ದಾರೆ .










