ಸಿದ್ದರಾಮಯ್ಯ ಹೇಳಿಕೆಗೆ ಶ್ರೀರಾಮುಲು ತಿರುಗೇಟು…

250
firstsuddi

ಬಳ್ಳಾರಿ: ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಾತನಾಡಿಯೇ ಇಲ್ಲ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು ವಿಧಾನಸಭೆ ಹಾಗು ಲೋಕಸಭೆಯಲ್ಲಿ ನಾನು ಮಾತನಾಡುವಾಗ ನೀವು ನಿದ್ದೆಯಲ್ಲಿದ್ದಿರಿ ಅನಿಸುತ್ತಿದೆ. ಸಂಸದರ ನಿಧಿಯ ಸಮರ್ಪಕ ಬಳಕೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದೇನೆ. 16ನೇ ಲೋಕಸಭೆಯ 20 ಚರ್ಚೆಯಲ್ಲಿ ಭಾಗವಹಿಸಿ, 572 ಪ್ರಶ್ನೆ ಕೇಳಿದ್ದೇನೆ. ನಿಮ್ಮ ರಾಹುಲ್ ಗಾಂಧಿ ಕೇವಲ 12 ಚರ್ಚೆಯಲ್ಲಿ ಭಾಗವಹಿಸಿದ್ದು, ಒಂದು ಪ್ರಶ್ನೆಯನ್ನೂ ಕೇಳಿಲ್ಲ. ಸಿದ್ದರಾಮಯ್ಯನವರು ಇದನ್ನೆಲ್ಲ ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಸಿದ್ದರಾಮಯ್ಯನವರು ಹಗರಿಬೊಮ್ಮನಹಳ್ಳಿಯಲ್ಲಿ ನನ್ನ ಬಗ್ಗೆ ವ್ಯಂಗ್ಯದ ಮಾತನ್ನಾಡಿದ್ದಾರೆ. ಇದೇ ಕಾರಣಕ್ಕಾಗಿಯೇ 420 ಎಂದೆಲ್ಲ ಕರೆದಿದಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಶ್ರೀರಾಮುಲು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.