ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಎನ್‍ಕೌಂಟರ್ ನಡೆದಿದ್ದು, ಭಾರತೀಯ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಶ್ರೀನಗರದ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಯೋಧರು ಕೂಡಲೇ ಕಾರ್ಯಪ್ರವೃತ್ತರಾಗಿ ಕಾರ್ಯಾಚರಣೆಗೆ ಮುಂದಾಗಿದ್ದರು. ಯೋಧರು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆ ಯೋಧರು ಕಾರ್ಯಾಚರಣೆಯನ್ನು ಎನ್‍ಕೌಂಟರ್ ಆಗಿ ಪರಿವರ್ತಿಸಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದು, ಸ್ಥಳದಲ್ಲಿ ಇನ್ನು ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










