ಶೃಂಗೇರಿ ಕಪ್ಪೆಶಂಕರ ದೇವಾಲಯ ಮುಳುಗಡೆ.

276
firstsuddi

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ, ಶೃಂಗೇರಿ ಕಪ್ಪೆಶಂಕರ ದೇವಾಲಯ ಮುಳುಗಡೆಯಾಗಿದ್ದು. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸ್ಥಳೀಯರು ಹಾಗೂ ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಶೃಂಗೇರಿಯ ಸಂಧ್ಯಾವಂದನ ಮಂಟಪ ಕೂಡ ಮುಳುಗಡೆಯಾಗಿದ್ದು, ದೇವಾಲಯದ ಪರ್ಯಾಯ ಮಾರ್ಗವು ಮುಳುಗಡೆಯಾಗಿದೆ. ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಕೊಪ್ಪ, ಎನ್.ಆರ್ ಪುರ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಣೆ ಮಾಡಲಾಗಿದೆ.