ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ…

252
firstsuddi

ಬೆಂಗಳೂರು:  ಪ್ರೀತಿಸಲು ಒಪ್ಪದಿದ್ದಕ್ಕೆ ಎಸ್​ಎಸ್​ಎಲ್​​ಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ  ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕೀರ್ತನಾ(16) ಮೃತ ದುರ್ದೈವಿ. ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಗಂಗಾಧರಪುರ ಬಳಿ ಯುವಕ ಬಾಲಕಿಯ ಕುತ್ತಿಗೆಗೆ ಮಚ್ಚಿನಿಂದ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ.  ದೊಡ್ಡಬಳ್ಳಾಪುರ ಪೊಲೀಸರು  ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.