ಬೀದಿ ನಾಯಿಗಳ ದಾಳಿ-ಐವರು ಮಕ್ಕಳಿಗೆ ಗಾಯ…

161
firstsuddi

ಮೈಸೂರು : ಬೀದಿ ನಾಯಿಗಳ ದಾಳಿಯಿಂದ ಐವರು ಮಕ್ಕಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿಯಲ್ಲಿ ನಡೆದಿದೆ. ಮಕ್ಕಳು ತಮ್ಮ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ಮಕ್ಕಳ ಮೇಲೆ ದಾಳಿ ಮಾಡಿದ್ದು, ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ನಾಲ್ವರನ್ನು ನಂಜನಗೂಡು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ಹಾವಳಿಯನ್ನು ತಡೆಯುವಂತೆ ದೂರು ನೀಡಿದ್ದರೂ ಇದಕ್ಕೆ ಸ್ಪಂಧಿಸದ ಗ್ರಾಮ ಪಂಷಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಗಾಯಗೊಂಡಿರುವ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಗ್ರಾಮ ಪಂಚಾಯಿತಿಯೇ ಭರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.