ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ…

290
firstsuddi

ಚಿತ್ರದುರ್ಗ: ಮನೆ ಮುಂದೆ ಅಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಜಿಲ್ಲೆಯ ಹೊಸದುರ್ಗ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದ್ದು, ಫಜಲ್(5)  ಎಂಬ ಬಾಲಕ ರಾತ್ರಿ ಮನೆಯ ಮುಂದೆ ಆಟವಾಡುತ್ತಿದ್ದಾಗ ಆರು ಬೀದಿನಾಯಿಗಳು  ಬಾಲಕನನ್ನು ಸುತ್ತುವರಿದು ಕಚ್ಚಿವೆ. ತಕ್ಷಣ ಸ್ಥಳೀಯರು ಬಾಲಕನನ್ನು ನಾಯಿಗಳಿಂದ ರಕ್ಷಿಸಿದ್ದಾರೆ. ಹೊಸದುರ್ಗ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು,  ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಪುರಸಭೆ ವಿರುದ್ಧ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.