ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಅವರ ಹಿತ ಕಾಯಲು ಶ್ರಮಿಸಬೇಕು.- ಶ್ರೀಪತಿ ಅಳಗುಂದ…

436
firstsuddi

ಚಿಕ್ಕಮಗಳೂರು – ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ರಿಪ್ಪನ್‍ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶ್ರೀಪತಿ ಅಳಗುಂದ ಕಿವಿಮಾತು ಹೇಳಿದರು.ನಗರದ ಜ್ಯೋತಿನಗರ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡೆ, ಸಾಂಸ್ಕøತಿಕ, ಎನ್‍ಎಸ್‍ಎಸ್ ಮತ್ತು ರೆಡ್‍ಕ್ರಾಸ್ ಘಟಕಗಳನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘಗಳು ಇತ್ತೀಚಿನ ವರ್ಷಗಳಲ್ಲಿ ತಮ್ಮ ಶಿಕ್ಷಣಕ್ಕೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸುತ್ತಿರುವುದು, ಹೋರಾಟ ನಡೆಸುವುದು ಹೆಚ್ಚುತ್ತಿದೆ ಎಂದ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಠಿಯಿಂದ ಇಂತಹ ಬೆಳವಣಿಗೆಗಳು ಸಲ್ಲದು ಎಂದರು.ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಅವರ ಹಿತ ಕಾಯಲು ಶ್ರಮಿಸಬೇಕು ಎಂದು ಸಲಹೆ ಮಾಡಿದರು.

ವಿಜಯಪುರ ಚರ್ಚ್‍ನ ಫಾದರ್ ಪೀಟರ್ ಬ್ರಾಂಕ್ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಆದರೆ ವಿದ್ಯಾರ್ಥಿ ದೆಸೆಯಲ್ಲಿ ಓದಿಗೆ ಮಾತ್ರ ಪ್ರಾಮುಖ್ಯತೆ ನೀಡಬೇಕು ಎಂದರು.ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು, ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಕಾರ್ಡೋಜ ಅಧ್ಯಕ್ಷತೆ ವಹಿಸಿದ್ದರು, ಫಾದರ್ ಡಾ|| ಅಂತೋಣಿ ರಾಜ್, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಎಂ.ಎ.ವಿನಯ್ ಕುಮಾರ್ ಉಪಸ್ಥಿತರಿದ್ದರು.ವಿದ್ಯಾರ್ಥಿ ಚಂದನ ಕಾರ್ಯಕ್ರಮವನ್ನು ನಿರೂಪಿಸಿದರು, ಉಪನ್ಯಾಸಕ ಚಂದ್ರಶೇಖರ್ ಸ್ವಾಗತಿಸಿದರು, ಪ್ರಿಯಾ ವಂದಿಸಿದರು.