ಚಿತ್ರದುರ್ಗ: ಚಂದನವನದ ಖ್ಯಾತ ನಟ ಕಿಚ್ಚ ಸುದೀಪ್ ಮುಂಬರೋ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಖಾಡಕ್ಕಿಳಿಯಲಿದ್ದು, ಈ ಬಗ್ಗೆ ಸುದೀಪ್ ಕೂಡ ಚಿಂತನೆ ನಡೆಸಿದ್ದಾರೆಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡ್ತಿದೆ.
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಪರಿಶಿಷ್ಟ ವರ್ಗಕ್ಕೆ ಮೀಸಲಾಗಿದ್ದು, ಇಲ್ಲಿಂದಲೇ ಸ್ಪರ್ಧಿಸುವಂತೆ ಕಾಂಗ್ರೆಸ್ನಿಂದ ಆಹ್ವಾನ ಬಂದಿದ್ದು, ಕಿಚ್ಚ ಸುದೀಪ್ ಇಲ್ಲಿಂದಲೇ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕ್ಷೇತ್ರ ಹಾಗೂ ರಾಜ್ಯದಲ್ಲಿ ಹರಿದಾಡ್ತಿದೆ.
ವಿಷ್ಣುವರ್ಧನ್ ಸ್ಮಾರಕ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರನ್ನ ಭೇಟಿ ಮಾಡಿದ ವೇಳೆ, ಸುದೀಪ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗ್ತಿದೆ. ಇಷ್ಟೆ ಅಲ್ಲದೆ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಲಕ್ಷಕ್ಕೂ ಅಧಿಕ ನಾಯಕ ಸಮುದಾಯದ ಮತಗಳಿರೋ ಕಾರಣ, ಸುದೀಪ್ ಕೂಡ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆಂಬ ಬಿಸಿ ಬಿಸಿ ಚರ್ಚೆ ಮತ್ತಷ್ಟು ಜೋರಾಗಿದೆ.