ಬೆಂಗಳೂರು: ನಿಖಿಲ್ ಕುಮಾರ್ ಹಾಗೂ ರಚಿತಾ ರಾಮ್ ಅಭಿನಯದ ‘ಸೀತಾರಾಮ ಕಲ್ಯಾಣ’ ಸಿನಿಮಾ ನೋಡಿ ನಿಖಿಲ್ ಕುಮಾರ್ ಅಭಿನಯದ ಬಗ್ಗೆ ಕಿಚ್ಚ ಸುದೀಪ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ನಿಖಿಲ್ ಖಂಡಿತವಾಗಿಯೂ ಭರವಸೆಯ ನಟ.ನಿಖಿಲ್ ಪರ್ಫಾಮೆನ್ಸ್ ನನಗೆ ತುಂಬಾ ಇಷ್ಟ ಆಯ್ತು. ನಿಮ್ಮನ್ನು ಜನರಿಗೆ ಇನ್ನೂ ಹೆಚ್ಚು ಹತ್ತಿರವಾಗುವ ಪಾತ್ರದಲ್ಲಿ ನೋಡಲು ಇಚ್ಛಿಸುತ್ತೇನೆ. ಬೆಸ್ಟ್ ವಿಶ್ ಮೈ ಫ್ರೆಂಡ್.” ಎಂದು ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.











