ಬೆಂಗಳೂರು : ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರ ನಟನೆಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ದಾದಾ ಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್2020ರ “ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್” ಪ್ರಶಸ್ತಿಗೆ ಸುದೀಪ್ ಅವರು ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಹಾಗೂ ಮಹಾತ್ಮ ಗಾಂಧೀಜಿಯವರ 150ನೇ ವರ್ಷದ ಜನ್ಮದಿನದ ಅಂಗವಾಗಿ ಫೆ.20ರಂದು ಮುಂಬೈನ ಖಾಸಗಿ ಹೋಟೆಲ್‍ನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, “ದಬಾಂಗ್-3” ಚಿತ್ರದ ಬಲ್ಲಿಸಿಂಗ್ ಪಾತ್ರಕ್ಕೆ ಸುದೀಪ್ ಅವರಿಗೆ ಈ ಪ್ರಶಸ್ತಿ ಒಲಿದು ಬಂದಿದೆ. ದಾದಾ ಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‍ಗೆ ಸುದೀಪ್ ಅವರು ಆಯ್ಕೆಯಾಗಿರುವ ವಿಷಯವನ್ನು ದಾದಾ ಸಾಹೇಬ್ ಫಾಲ್ಕೆ ಅವರ ಮೊಮ್ಮಗ ಚಂದ್ರಶೇಖರ್ ಪುಸಲ್ಕರ್ ಅವರು ಖಚಿತಪಡಿಸಿದ್ದು, ಇವರು ದಾದಾ ಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಅವಾರ್ಡ್ ನ ಜ್ಯೂರಿ ಪ್ರೆಸಿಡೆಂಟ್ ಆಗಿದ್ದಾರೆ.











