ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಸುಧಾ ಮೂರ್ತಿ ಚಾಲನೆ…

395
firstsuddi

ಮೈಸೂರು: ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ನಾಳೆ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವ ಬೆಳಿಗ್ಗೆ 7.05 ರಿಂದ 7.35 ರ ತುಲಾ ಲಗ್ನದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.