ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ…

235
firstsuddi

ತುಮಕೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಹಳ್ಳಿಯಲ್ಲಿ ನಡೆದಿದೆ. ಕಾವ್ಯ(23) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದ್ದು, ಕಾವ್ಯ ಅವರು ಕಳೆದ ನಾಲ್ಕು ವರ್ಷಗಳ ಹಿಂದೆ ಅಂಜನ್ ಎಂಬುವವರನ್ನು ವಿವಾಹವಾಗಿದ್ದು, ಪ್ರತಿದಿನ ಅಂಜನ್ ಅವರು ವರದಕ್ಷಿಣೆಗಾಗಿ ಕಾವ್ಯ ಅವರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು, ಇದರಿಂದ ಬೇಸತ್ತು ಕಾವ್ಯ ಅವರು ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಾವ್ಯ ಅವರ ಕುಟುಂಬಸ್ಥರು ಆರೋಪಿಸಿದ್ದು, ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜಯನಗರ ಪೊಲೀಸರು ಪತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.