ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಇನ್ನಿಲ್ಲ…

227
firstsuddi

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ(98) ಅವರು ಇಂದು ಬೆಂಗಳೂರಿನ ಬಿಜಿಎಸ್  ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆ, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸೂಲಗಿತ್ತಿ ನರಸಮ್ಮಅವರು ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು.  ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ  3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ನರಸಮ್ಮ ಅವರು 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದರು.