ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಸಾವಿರಾರು ಬೆಂಬಲಿಗರೊಂದಿಗೆ ತೆರಳಿ ನಾಮ ಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲಿ ಪುತ್ರ ಅಭಿಷೇಕ್, ನಟ ಯಶ್, ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಇತರರು ಇದ್ದರು.










