ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಸುಮಲತಾ ಅಂಬರೀಶ್…

169
firstsuddi

ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಇಂದು ಭೇಟಿ ಮಾಡಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಸುಮಲತಾ ಅಂಬರೀಶ್ ಅವರು ಭೇಟಿ ನೀಡಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಚರ್ಚಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್ ಅವರು ತಮಗೆ ಬೆಂಬಲ ನೀಡಿರುವ ಯಡಿಯೂರಪ್ಪ ಅವರಿಗೆ ಧನ್ಯವಾದ ಹೇಳಲು ಬಂದಿದ್ದೇನೆ ಎಂದು ಹೇಳಿದರು.