ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್‍ನಿಂದ ನೊಟೀಸ್ ಜಾರಿ…

155
firstsuddi

ನವದೆಹಲಿ : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ನಕಲಿ ಪ್ರಮಾಣ ಪತ್ರ ಸಲ್ಲಿಕೆ ಮಾಡಿರುವ ಆರೋಪದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ. ಸುಪ್ರೀಂ ಕೋರ್ಟ್‍ಗೆ ಈ ಹಿಂದೆ ಮಾಜಿ ಸಚಿವ ಎ.ಮಂಜು ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ಇನ್ನು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.