ಮೂಡಿಗೆರೆ :ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಮೂಡಿಗೆರೆ ಲಯನ್ಸ್ ವೃತ್ತದಲ್ಲಿ ಬಿಜೆಪಿಯಿಂದ ವಂದೇ ಮಾತರಂ ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ದುಂಡುಗ ಪ್ರಮೋದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಸಿ ರತನ್, ಬಿಜೆಪಿ ಮುಖಂಡರಾದ ಕಣಚೂರು ವಿನೋದ್, ಚಂದ್ರೇಶ್ ಮಗ್ಗಲಮಕ್ಕಿ, ಬಿಳಗುಳ ಚಂದ್ರಶೇಖರ್, ಹಾಗೂ ಬಜರಂಗದಳ ತಾಲ್ಲೂಕು ಸಂಚಾಲಕ ಅವಿನಾಶ್, ಬಾಲು, ಮುಗ್ರಹಳ್ಳಿ ಮಹೇಶ್, ಪಟ್ಟಣ ಪಂಚಾಯಿತಿ ಸದಸ್ಯ ಲತಾ ಲಕ್ಷ್ಮಣ್, ಬಿದರಹಳ್ಳಿ ಜಯಪಾಲ್, ಕೊಟ್ಟಿಗೆಹಾರ ಸಂಜಯ್, ವೆಂಕಿ ಬಾಪುನಗರ, ಸೇರಿದಂತೆ ಇತರರು ಇದ್ದರು.









