ನವವಿವಾಹಿತೆ ಅನುಮಾನಾಸ್ಪದ ಸಾವು …

379
firstsuddi

ಕಲಬುರಗಿ: ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ನಡೆದಿದೆ.ಪುಷ್ಪ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಎರಡು ತಿಂಗಳ ಹಿಂದಷ್ಟೇ ಕಮಲಾಪುರ ಪಟ್ಟಣದ ನಿವಾಸಿ ಬಾಬುರಾವ್ ಎಂಬಾತನೊಂದಿಗೆ ಪುಷ್ಪಳ ಮದುವೆಯಾಗಿತ್ತು. ಪುಷ್ಪ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,  ಪುಪ್ಟಳ ಸಾವಿನ ಸುದ್ದಿ ತಿಳಿದ ಕೂಡಲೆ ಸ್ಥಳಕ್ಕಾಗಮಿಸಿದ ಪುಷ್ಪಾಳ ಪೋಷಕರು ಬಾಬುರಾವ್ ವಿರುದ್ಧ ಆರೋಪ ಮಾಡಿದ್ದಾರೆ. ಈ ಸಂಬಂಧ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.