ತರೀಕೆರೆ:ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವನ ಸ್ಥಿತಿ ಗಂಭೀರ…

241
firstsuddi

ಚಿಕ್ಕಮಗಳೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ  ಗಾಯಗಳಾಗಿರುವ ಘಟನೆ  ತರೀಕೆರೆ ತಾಲೂಕಿನ ಬೆಟ್ಟತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಹನುಮಂತಪ್ಪ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು,  ಅವರನ್ನು   ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತರೀಕೆರೆ ಪುರಸಭೆ ಸದಸ್ಯ ಈರಣ್ಣ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.