ತರೀಕೆರೆ:ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿದ ಮಹಿಳೆಯರು…

216
firstsuddi

ಚಿಕ್ಕಮಗಳೂರು : ಸೈಟಿನ ಹಕ್ಕು ಪತ್ರ ನೀಡದಿದ್ದಕ್ಕೆ ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಉಡೇವ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. 40 ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು ಅಧಿಕಾರಿಗಳು ಹಕ್ಕು ಪತ್ರ ನೀಡದ ಹಿನ್ನೆಲೆ 50 ಕ್ಕೂ ಹೆಚ್ಚು ಮಹಿಳೆಯರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಗ್ರಾಮ ಪಂಚಾಯಿತಿ ಪಿಡಿಓ ನಾಗರಾಜ್ ಅವರಿಗೆ ಮಹಿಳೆಯರು ಸಖತ್ ತರಾಟೆಗೆ ತೆಗೆದುಕೊಂಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಂಗದಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.