ಹೈದರಾಬಾದ್ : ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪಾಲಿಟಿಕ್ಸ್ ಗೆ ಬರುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳಿಗೆ ಹಲವು ದಿನಗಳಿಂದ ಕಾಡುತ್ತಿತ್ತು. ಆದರೆ, ಈ ಕುರಿತು ನಟ ಅಲ್ಲು ಅರ್ಜುನ್ ಮಾತನಾಡಿದ್ದಾರೆ . ಅಲ್ಲು ಅರ್ಜುನ್ ಹೆಚ್ಚಾಗಿ ಸೋಶಿಯಲ್ ಮಿಡಿಯಾಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವು ಖಾಸಗಿ ಕಾರ್ಯಕ್ರಮಗಳಲ್ಲಿ ಕುಟುಂಬಸ್ಥರ ಜೊತೆಯಷ್ಟೆ ಭಾಗವಹಿಸುತ್ತಾರೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮ್ಮ ಮುಂದಿನ ಸಿನಿ ಜೀವನ ಹಾಗೂ ರಾಜಕೀಯ ಪ್ರವೇಶದ ಕುರಿತು ಮಾತನಾಡಿ ಎಲ್ಲರಿಗೂ ಶಾಕ್ ನೀಡಿದ್ದಾರೆ ಎಂದು ಸ್ಥಳಿಯ ಮಾಧ್ಯಮವೊಂದು ಸುದ್ದಿ ಮಾಡಿದೆ.
ಅರ್ಜುನ್ ಅವರ 40 ನೇ ವಯಸ್ಸಿನ ಬಳಿಕವಷ್ಟೆ ರಾಜಕೀಯ ಎಂಟ್ರಿ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಆಂಧ್ರ ಹಾಗೂ ತೆಲಂಗಾಣ ರಾಜ್ಯದ ರಾಜಕೀಯ ಸ್ಥಿತಿಗತಿಗಳನ್ನ ಗಮನಿಸುತ್ತಿರೋ ಅಲ್ಲು ಸೂಕ್ತ ಸಮಯದಲ್ಲಿ ರಾಜಕೀಯ ಪ್ರವೇಶದ ಚಿಂತನೆ ನಡೆಸಿದ್ದಾರೆ. ತಮ್ಮ ವಿಶಿಷ್ಟ ನಟನೆಯ ಮೂಲಕ ಅಲ್ಪ ಅವಧಿಯಲ್ಲೇ ಟಾಲಿವುಡ್ನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನ ಗಳಿಸಿದ್ದಾರೆ ಅಲ್ಲು. ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ರಾಜಕೀಯ ಪ್ರವೇಶ ಕುರಿತ ಸುದ್ದಿ ಕೇಳಿ ಅಚ್ಚರಿಗೊಳಗಾಗಿದ್ದಾರೆ.