ಹೈದರಾಬಾದ್: 2007ರಲ್ಲಿ ಹೈದರಾಬಾದ್ ಅವಳಿ ಬಾಂಬ್ ಸ್ಫೋಟ ಘಟನೆಯಲ್ಲಿ 42 ಜನರು ಮೃತಪಟ್ಟಿದ್ದರು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಮೊಹಮ್ಮದ್ ಅಕ್ಬರ್ ಇಸ್ಮಾಯಿಲ್ ಚೌಧರಿ ಹಾಗೂ ಅನೀಕ್ ಶಫೀಖ್ ಸಯೀದ್ ನನ್ನು ತಪ್ಪಿತಸ್ಥರೆಂದು ತಿಳಿಸಿದ್ದು, ಫರೂಖ್ ಶರ್ಫುದ್ದೀನ್ ತರ್ಕಾಶ್, ಮೊಹಮ್ಮದ್ ಸಾದಿಕ್ ಇಸ್ರಾರ್ ಅಹ್ಮದ್ ಶೇಕ್ ಮತ್ತು ತರಿಕ್ ಅಂಜುಮ್ ಎಂಬುವವರನ್ನು ಖುಲಾಸೆಗೊಳಿಸಿದೆ.
ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ತೆಲಂಗಾಣ ಪೊಲೀಸರು ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಐವರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕಐವರೂ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಇದೀಗ ತಪ್ಪಿತಸ್ಥನಾಗಿರುವ ಅನೀಕ್ ಶಫೀಕ್ ಸಯೀದ್, ರಿಯಾಜ್ ಭಟ್ಕಳ್ ಹಾಗೂ ಇಸ್ಮಾಯಿಲ್ ಚೌಧರಿ ಮೂವರು ಸೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ.