ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರಿಂದ ಭಾರತ್ ಬಂದ್ ಕರೆ ನೀಡಲಾಗಿದ್ದು, ಭಾರತ್ ಬಂದ್ ಗೆ ರಾಜ್ಯದಲ್ಲಿ ಪ್ರತಿಪಕ್ಷಗಳು ಬೆಂಬಲ ಸೂಚಿಸುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ.
ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದು ಬರೆದುಕೊಂಡಿದ್ದಾರೆ.
ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ. (2/2)
— B.S. Yediyurappa (@BSYBJP) December 8, 2020










