ಮೈತ್ರಿ ಸರ್ಕಾರ ರಾಜ್ಯದಲ್ಲಿ ಸಂಪೂರ್ಣ ಅವಧಿ ಮುಗಿಯುವವರೆಗೂ ಆಡಳಿತ ನಡೆಸಲಿದೆ -ಶ್ರೀಕಂಠೇಗೌಡ

462
firstsuddi

ಚಿಕ್ಕಮಗಳೂರು-ರಾಜ್ಯದ ಪ್ರಮುಖ ಮೂರೂ ಪಕ್ಷಗಳ ಎಲ್ಲಾ ಶಾಸಕರೂ ಅವಧಿಗಿಂತ ಒಂದು ದಿನ ಮುಂಚೆಯೂ ಚುನಾವಣೆಗೆ ಹೋಗಲು ತಯಾರಿಲ್ಲದಿರುವುದರಿಂದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಐದು ವರ್ಷಗಳ ಕಾಲ ಆಡಳಿತವನ್ನು ನಡೆಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹೇಳಿದರು.
ನಗರದ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಜಿಲ್ಲಾ ಜೆಡಿಎಸ್ ಗುರುವಾರ ಏರ್ಪಡಿಸಿದ್ದ ವಿಧಾನಪರಿಷತ್ ಸದಸ್ಯರಾದ ಎಸ್.ಎಲ್.ಧರ್ಮೇಗೌಡ ಮತ್ತು ಎಸ್.ಎಲ್.ಭೋಜೇಗೌಡ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಮುಖ ಮೂರೂ ಪಕ್ಷಗಳ ಯಾವೊಬ್ಬ ಶಾಸಕರೂ ಅವಧಿಗಿಂತ ಮುಂಚೆ ಚುನಾವಣೆಗೆ ಹೋಗಲು ತಯಾರಿಲ್ಲ ಇದರ ಜೊತೆಗೆ ಕಾಂಗ್ರೇಸ್ ರಾಜ್ಯಾಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಆ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪರವಾಗಿದೆ ಎಂದ ಅವರು ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ರಾಜ್ಯದಲ್ಲಿ ಸಂಪೂರ್ಣ ಅವಧಿ ಮುಗಿಯುವವರೆಗೂ ಆಡಳಿತ ನಡೆಸಲಿದೆ ಎಂದರು.
ರೈತರ ಸಾಲ ಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಅವರು ತಮ್ಮ ಮಾತಿಗೆ ಬದ್ದರಾಗಿದ್ದಾರೆ ಆದರೆ ಮೈತ್ರಿ ಸರ್ಕಾರ ಇರುವುದರಿಂದಾಗಿ ಸಾಲ ಮನ್ನಾ ಮಾಡಲು ಸ್ವಲ್ಪ ತಡವಾಗಿದೆ ಎಂದು ತಿಳಿಸಿದರು.
ಜುಲೈ 5 ರಂದು ನಡೆಯಲಿರುವ ಪರಿಷ್ಕøತ ಬಜೆಟ್‍ನಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಲ ಮನ್ನಾ ಪ್ರಕಟಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.