ಕೇರಳ: ಅತಿವೃಷ್ಟಿಯಿಂದಾಗಿ ತತ್ತರಿಸಿ ಹೋಗಿರುವ ಕೇರಳ ರಾಜ್ಯಕ್ಕೆ ಅರಬ್ ರಾಷ್ಟ್ರ 700 ಕೋಟಿ ರೂ.ಗಳ ನೆರವು ನೀಡುವುದಾಗಿ ಘೋಷಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದು, ಕೇರಳದಲ್ಲಿ ಪ್ರವಾಹದಿಂದ ಈವರೆಗೆ 20000 ಕೋಟಿ ರೂ.ಗಳಿಗೂ ಹೆಚ್ಚಿನ ಹಾನಿ ಉಂಟಾಗಿದ್ದು, ಕೇಂದ್ರ ಸರ್ಕಾರವು 500 ಕೋಟಿ ಹಣವನ್ನು ಕೇರಳಕ್ಕಾಗಿ ಬಿಡುಗಡೆ ಮಾಡಿದ್ದು, ಜೊತೆಗೆ ಕೇರಳ ಪ್ರವಾಹವನ್ನು ‘ಗಂಭೀರ ಸ್ವರೂಪದ ಪ್ರಾಕೃತಿಕ ವಿಕೋಪ’ ಎಂದು ಘೋಷಿಸಿದ್ದು, ಯುಎಇಯು ಕೇಂದ್ರ ಸರ್ಕಾರ ನೀಡಿದ ಆರ್ಥಿಕ ನೆರವಿಗಿಂತಲೂ ದೊಡ್ಡ ಮೊತ್ತದ ಆರ್ಥಿಕ ನೆರವನ್ನು ಘೋಷಿಸಿದೆ.