ಶ್ರೀನಗರ : ಜಿಲ್ಲೆಯಲ್ಲಿ ಭಾರತೀಯ ಸೈನಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಶ್ರೀನಗರದ ಬಾರ್ಜುಲ್ಲಾ-ರಾಮ್‍ಘಾಟ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಗುಪ್ತಚರ ಇಲಾಖೆಯಿಂದ ಮಾಹಿತಿ ತಿಳಿದ ಜಮ್ಮು ಕಾಶ್ಮೀರಾದ ಪೊಲೀಸರು ಹಾಗೂ ಸಿ.ಆರ್.ಪಿ.ಎಫ್ ಯೋಧರು ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರು ಅಡಗಿದ್ದ ಪ್ರದೇಶವನ್ನು ಸುತ್ತುವರೆದಿದ್ದರು. ಈ ವೇಳೆ ಉಗ್ರರಿಗೆ ತಪ್ಪಿಸಿಕೊಳ್ಳಲು ಯಾವುದೇ ಮಾರ್ಗ ಇಲ್ಲದಿದ್ದರಿಂದ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಸಂಘಟನೆಯ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಘಟಾ ಸ್ಥಳದಲ್ಲಿ ಇನ್ನೂ ಎನ್‍ಕೌಂಟರ್ ಮುಂದುವರೆದಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










