ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಬಿಎಂಪಿ ಮಂಡಿಸಿರುವ ಬಜೆಟ್‌ ಉತ್ತಮವಾಗಿದೆ: ಡಾ.ಜಿ ಪರಮೇಶ್ವರ್…

287
firstsuddi

ಬೆಂಗಳೂರು: 2019-20ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್​ ಮಂಡನೆಯಾಗಿದ್ದು,  ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಬಿಬಿಎಂಪಿ ಮಂಡಿಸಿರುವ ಬಜೆಟ್‌ ಗೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಬಿಎಂಪಿ ಮಂಡಿಸಿರುವ ಬಜೆಟ್‌ ಉತ್ತಮವಾಗಿದೆ. ಮಹಿಳಾ ಕಲ್ಯಾಣ, ರಸ್ತೆ ಅಭಿವೃದ್ಧಿ, ಆರೋಗ್ಯ, ಕಾನೂನು ಸುವ್ಯವಸ್ಥೆ ಸೇರಿದಂತೆ ಹತ್ತಾರು ಜನಪರ ಯೋಜನೆಗಳನ್ನು ಒಳಗೊಂಡಿದೆ. ತೆರಿಗೆ ಸಂಗ್ರಹಕ್ಕೆ ಕಠಿಣ ನಿಲುವು ತೆಗೆದುಕೊಳ್ಳಲಾಗಿದೆ. ಒಟ್ಟಾರೆ ಬಜೆಟ್‌ ಅಭಿವೃದ್ಧಿಗೆ ಪೂರಕ ಹಾಗೂ ಪರಿಸರ ಸ್ನೇಹಿಯಾಗಿದೆ  ಎಂದು ಡಾ. ಜಿ ಪರಮೇಶ್ವರ್ ಅವರು ಟ್ವಿಟ್ ಮಾಡಿದ್ದಾರೆ.