ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಸುವುದಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ…

322
firstsuddi

ಬೆಂಗಳೂರು: ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಸುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದು, ಡೀಸೆಲ್ ದರ ಏರಿಕೆಯಿಂದಾಗಿ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ತೈಲ ದರ ಲೀಟರ್ ಗೆ 58 ರೂ ಇದ್ದ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಏರಿಕೆಯಾಗಿತ್ತು. ಆದರೆ ಅಲ್ಲಿಂದ ಇಲ್ಲಿವರೆಗೆ ಏರಿಕೆ ಆಗಿಲ್ಲ.ಹೀಗಾಗಿ ಸಾರಿಗೆ ನಿಗಮಗಳು ಸುಮಾರು 3 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಅನುಭವಿಸಿವೆ. ಆದರೂ ಸಾರ್ವಜನಿಕರಿಗೆ ಹೊರೆಯಾಗುವುದನ್ನು ತಪ್ಪಿಸಲು ಸದ್ಯಕ್ಕೆ ಬಸ್ ದರ ಏರಿಕೆ ಬೇಡ ಎಂದು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ