ಉತ್ತರಾಖಂಡ – ಹೃಶಿಕೇಶ್-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂರ್ಯಧರ್ ಬಳಿ ಆಯತಪ್ಪಿ 250 ಅಡಿ ಆಳದ ಪ್ರಪಾತಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ ಘಟನೆಯಲ್ಲಿ14 ಜನ ಮೃತಪಟ್ಟಿದ್ದು, 18 ಜನ ಗಂಭೀರ ಗಾಯಗೊಂಡಿದ್ದು, 6 ಜನರ ಸ್ಥಿತಿ ಚಿಂತಜನಕವಾಗಿದ್ದು ತಕ್ಷಣ ಸ್ಥಳಕ್ಕಾಗಮಿಸಿದ ರಕ್ಷಣಾ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡವರನ್ನು ಹೆಲಿಕಾಫ್ಟರ್ ಮೂಲಕ ಹೃಷೀಕೇಶನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ, ಉತ್ತರಾಖಂಡ ರಾಜ್ಯ ಸರ್ಕಾರವು ಅಪಘಾತದಲ್ಲಿ ಮೃತಪಟ್ಟ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.