ಉತ್ತರಕನ್ನಡ:ಚಾಲಕನ ನಿಯಂತ್ರಣ ತಪ್ಪಿ ಕಾರು ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತರು ಫಾತಿಮಾ, ರುಕಿಯಾ, ಚಾಬುಸಾಬ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಾಗರ ತಾಲೂಕಿನ ಆನಂದಪುರ ಮೂಲದವರು ಎನ್ನಲಾಗಿದ್ದು, ಗೋವಾದಲ್ಲಿ ಮದುವೆ ಕಾರ್ಯ ಮುಗಿಸಿ ವಾಪಸ್ ಊರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










