ಚಿಕ್ಕಮಗಳೂರು: ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಕೇಂದ್ರ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೇಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ಹಗರಣದ ವಿವರಗಳನ್ನು ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಅವರ ನೇತೃತ್ವದಲ್ಲಿ ವಿವಿಧೆಡೆ ಭಿತ್ತಿ ಪತ್ರ ಮತ್ತು ಬ್ಯಾನರ್‍ಗಳನ್ನು ಅಂಟಿಸಿದ ಕಾರ್ಯಕರ್ತರು ನಂತರ ಆಜಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಹಿಂದಿನ ಯುಪಿಎ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದರು.ರಫೇಲ್ ಯುದ್ದ ವಿಮಾನ ಖರೀದಿ ಹಗರಣ ದೇಶದಲ್ಲೇ ದೊಡ್ಡ ಹಗರಣವಾಗಿದೆ, ರಾಷ್ಟ್ರದ ರಕ್ಷಣೆ ಮಾಡುವ ಯುದ್ದ ವಿಮಾನಗಳ ಖರೀದಿಯಲ್ಲೂ ಭ್ರಷ್ಟಾಚಾರ ನಡೆಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜನ ತಲೆ ತಗ್ಗಿಸುವಂತೆ ಮಾಡಿದೆ ಎಂದು ದೂರಿದರು.ಇಡೀ ಹಗರಣದ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಕೇಂದ್ರ ಸರ್ಕಾರ ತಕ್ಷಣ ಕಾಂಗ್ರೇಸ್ ಪಕ್ಷಕ್ಕೆ ನೀಡಬೇಕು ಎಂದು ಆಗ್ರಹಿಸಿದ ಅವರು ಇಲ್ಲದಿದ್ದಲ್ಲಿ ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೇಸ್ ಐ.ಟಿ. ವಿಭಾಗದ ಅಧ್ಯಕ್ಷ ಕಾರ್ತಿಕ್ ಚೆಟ್ಟಿಯಾರ್, ಯುವ ಕಾಂಗ್ರೇಸ್ ಮುಖಂಡರಾದ ಸಿ.ಸಿ.ಮಧು, ರತನ್, ಪ್ರತಾಪ್, ಅಂತಕರಣ, ಸನ್ನಿಧ್, ಭರತ್, ವರುಣ್, ಪ್ರಚಾರ ಸಮಿತಿ ಅಧ್ಯಕ್ಷ ಹಿರೇಮಗಳೂರು ರಾಮಚಂದ್ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Home ಸ್ಥಳಿಯ ಸುದ್ದಿ ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಕೇಂದ್ರ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿದೆ.- ಕೆ.ವಿ.ಶಿವಕುಮಾರ್…