ರಕ್ಷಣಾ ಸಚಿವರು ಕೊಡಗಿಗೆ ಬಂದಾಗ ನಡೆದ ಅನಾನುಕೂಲಕ್ಕೆ ವಿಷಾಧಿಸುತ್ತೇನೆ.-ಮುಖ್ಯಮಂತ್ರಿ ಕುಮಾರಸ್ವಾಮಿ …

487
firstsuddi

ಬೆಂಗಳೂರು: ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಿದ ಸಂದರ್ಭದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಪ್ರವಾಹದ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಜನರ ಸಂಕಷ್ಟಕ್ಕೆ ನೆರವಾಗಿದ್ದು, ರಕ್ಷಣಾ ಸಚಿವರು ಪರಿಹಾರ ಕಾರ್ಯ ವೀಕ್ಷಿಸಲು ಕೊಡಗಿಗೆ ಬಂದಾಗ ನಡೆದ ಅನಾನುಕೂಲಕ್ಕೆ ವಿಷಾಧಿಸುತ್ತೇನೆ. ಈ ಬಗ್ಗೆ ಅವರೊಂದಿಗೂ ದೂರವಾಣಿಯಲ್ಲಿ ಮಾತನಾಡಿದ್ದೇನೆ.  ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ವಿಪತ್ತು ನಿರ್ವಹಣಾ ಸಂಸ್ಥೆಗಳು ಹಾಗೂ ಸ್ವಯಂ ಸೇವಕರ ನೆರವಿನೊಂದಿಗೆ ದಿನದ 24 ಗಂಟೆಯೂ ಕೊಡಗಿನಲ್ಲಿ ಪ್ರವಾಹ, ಭೂಕುಸಿತದಲ್ಲಿ ಸಿಲುಕಿಕೊಂಡ ನಾಗರಿಕರ ರಕ್ಷಣೆಗೆ ಹಾಗೂ ಪರಿಹಾರ ಪುನರ್ವಸತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಕೇಂದ್ರ ಸರ್ಕಾರವೂ ನಮ್ಮ ಬೆಂಬಲಕ್ಕೆ ನಿಂತಿದೆ ಎಂದು ಹೇಳಿದರು.