ಕೊಡಗಿನಲ್ಲಿ ಮುಂದುವರೆದ ಮಳೆಯ ಅಬ್ಬರ, ಹೆಲಿಕಾಪ್ಟರ್ ಮೂಲಕ ಸಂತ್ರಸ್ಥರನ್ನು ರಕ್ಷಿಸಲು ಮುಖ್ಯಮಂತ್ರಿ ಸೂಚನೆ…

321
firstsuddi

ಕೊಡಗು: ಭಾರೀ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಬದಿಗೆರೆ ಗ್ರಾಮಕ್ಕೆ ನದಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರಾಣ ಉಳಿಸಿಕೊಳ್ಳಲು ಗುಡ್ಡವನ್ನೇರಿ ಕುಳಿತಿದ್ದು, ಆದರೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡವೂ ಸಹ ಕುಸಿಯುವ ಭೀತಿ ಎದುರಾಗಿದ್ದು, ಗುಡ್ಡದಲ್ಲಿದ್ದ ಸುಮಾರು 300ಕ್ಕೂ ಹೆಚ್ಚು ಮಂದಿ ರಕ್ಷಣೆಗಾಗಿ ನೆರವಿನ ನಿರೀಕ್ಷೆಯಲ್ಲಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾಧಿಕಾರಿಗೆ ಕೂಡಲೇ ಹೆಲಿಕಾಪ್ಟರ್ ಮೂಲಕ ರಕ್ಷಿಸಲು ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಡಳಿತವು ಸಂತ್ರಸ್ಥರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲು ಮುಂದಾಗಿದ್ದು, ಜಿಲ್ಲಾಡಳಿತ ಮನವಿ ಮೇರೆಗೆ ಸೇನಾ ಹೆಲಿಕಾಪ್ಟರ್ ಗಳು ರಕ್ಷಣೆಗೆ ಆಗಮಿಸಿವೆ.