ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಮಂಡಿಸಿರುವ ಬಜೆಟ್ ಉತ್ತಮವಾಗಿದೆ :ಸಿದ್ದರಾಮಯ್ಯ…

226
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿಯವರು ಮಂಡಿಸಿರುವ ಬಜೆಟ್ ಒಟ್ಟು ರೂಪದಲ್ಲಿ ಉತ್ತಮವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದು, ಮೈತ್ರಿ ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಲಾಗಿದೆ. ಬಜೆಟ್ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ, ಸಮಾಜದ ಕಟ್ಟಕಡೆಯ ಮನುಷ್ಯನವರೆಗೂ ತಲುಪಿಸುವುದು ಸಮ್ಮಿಶ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.