ಹಾಸನ- ಶ್ರಾವಣ ಮಾಸ ಹಿನ್ನಲೆಯಲ್ಲಿ ಕುಮಾರಸ್ವಾಮಿ ದಂಪತಿ ಸಮೇತ ಹೊಳೆನರಸೀಪುರದ ಹರದನಹಳ್ಳಿಯಲ್ಲಿರುವ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಹೋದರ ಎಚ್ ಡಿ ರೇವಣ್ಣ ಅವರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದ್ದು, ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ ಕುಮಾರಸ್ವಾಮಿ, ತಮ್ಮ ಪತಿಗೆ ಮುಖ್ಯಮಂತ್ರಿ ಅಧಿಕಾರ ಸಿಕ್ಕಿದ ಹಿನ್ನಲೆಯಲ್ಲಿ ಹಾಗೂ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ಮಾವ ಹೆಚ್ ಡಿ ದೇವೇಗೌಡರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದ್ದೇವೆ, ಇಲ್ಲಿಂದ ನಂತರ ಧರ್ಮಸ್ಥಳ ಮಂಜುನಾಥ ದೇಗುಲ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಹೋಗಲಿದ್ದೇವೆ ಎಂದರು.