ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಕಾಂಗ್ರೆಸ್‍ನ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ. ಅತೃಪ್ತ ಶಾಸಕರು ವಿದೇಶಕ್ಕೇನು ಹೋಗಿಲ್ಲ. ಶಾಸಕರಿಗೆ ಅಸಮಾಧಾನವಿಲ್ಲ. ಸ್ಥಳೀಯವಾಗಿ ಸಮಸ್ಯೆಗಳಿವೆ ಅವುಗಳನ್ನು ನಿವಾರಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಫೆಬ್ರವರಿ 8 ರಂದು ಬಜೆಟ್ ಮಂಡಿಸಲಿದ್ದಾರೆ ಎಂದಿದ್ದಾರೆ.










