ಮಂಡ್ಯ: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಎಸ್.ಪುಟ್ಟರಾಜು ಅವರು ಜನರ ಅತಂತ್ರ ತೀರ್ಪಿನಿಂದಾಗಿ ಅನಿವಾರ್ಯ ಕಾರಣಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ನ ಭದ್ರಕೋಟೆ. ಮೈತ್ರಿ ಬೇಕು ಅಂತ ಮಂಡ್ಯದಲ್ಲಿ ಯಾರೂ ಗೋಗರೆಯುತ್ತಿಲ್ಲ.ಯಾರ ಬಳಿಯೂ ನಮಗೆ ಅಂಗಲಾಚಬೇಕಾದ ಅನಿವಾರ್ಯತೆ ಇಲ್ಲ . ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ .ಉಪ ಚುನಾವಣೆಯಲ್ಲಿ ಡೆಡ್ ಹಾರ್ಸ್ಗಳೆಲ್ಲಾ ಮಾತನಾಡುವ ಹಾಗೆ ಆಗಿದೆ ಎಂದು ಸಿ.ಎಸ್.ಪುಟ್ಟರಾಜು ಅವರು ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.










