ಮಂಗಳೂರು- ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆಯನ್ನು ಯಾವ ಕಾರಣಕ್ಕೆ ನೀಡಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಅಧಿಕಾರದ ಆಸೆ ಇಲ್ಲ.ಮುಂದಿನ ವಿಧಾನ ಸಭಾ ಚುನಾವಣೆವರೆಗೂ ನಾವು ಮುಖ್ಯಮಂತ್ರಿ ಸ್ಥಾನವನ್ನು ಬದಲಾಯಿಸುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷಗಳ ಕಾಲ ಆಡಳಿತ ನಡೆಸುತ್ತದೆ. ಮೈತ್ರಿ ಸಂದರ್ಭದಲ್ಲಿ ಮಾಡಿಕೊಂಡಿರುವ ಒಪ್ಪಂದಕ್ಕೆ ನಾವು ಬದ್ಧರಾಗಿದ್ದೇವೆ ಎಂದ ಅವರು ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಯಾವುದೇ ರೀತಿಯ ಅಭಿವೃದ್ದಿ ಕೆಲಸವಾಗಿಲ್ಲ. ವಿದೇಶದಿಂದ ಕಪ್ಪುಹಣವನ್ನು ತಂದು ದೇಶದ ಜನರಿಗೆ ಕೊಡುವುದಾಗಿ ಹೇಳಿದ್ದರು ಆದರೆ ಭ್ರಷ್ಟಾಚಾರಿಗಳಿಗೆ ಆಶ್ರಯ ನೀಡಿದ್ದಾರೆ. ಮೋದಿ ನೇತೃತ್ವದ ನಾಲ್ಕೂವರೆ ವರ್ಷ ಯಾವುದೇ ಅಭಿವೃದ್ದಿ ಕಂಡಿಲ್ಲ. ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದ್ದು, ರಾಜ್ಯದ ಬಿಜೆಪಿ ಸಂಸದರು ಕಾರ್ಯನಿರ್ವಹಣೆಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಎಂದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.