ಹಾಸನ : ಆಲೂರು ತಾಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದ ಚನ್ನೇನಹಳ್ಳಿ ಗ್ರಾಮದ ಪಿ.ಟಿ.ಪಾಲಾಕ್ಷ ಆಲೂರು ಅವರ ಶವ ವಾಟೆಹಳ್ಳಿ ಜಲಾಶಯದ ಸಮೀಪ ಪತ್ತೆಯಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಇವರ ಬಗ್ಗೆ ಆರೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲವಾರು ಕಡೆ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಮುಂಜಾನೆ ಪಾಲಾಕ್ಷ ಅವರ ಮೃತದೇಹ ನೀರಿನಲ್ಲಿ ತೇಲುತ್ತಿರುವ ಬಗ್ಗೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ದಾವಿಸಿ ಶವವನ್ನು ಮೇಲೆತ್ತಿ ತನಿಖೆಯನ್ನು ಮುಂದುವರೆಸಿದ್ದಾರೆ.