ಹೃದಯಾಘಾತದಿಂದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ದುರ್ಮರಣ…

264

ಕೊಪ್ಪಳ: ಗಣರಾಜ್ಯೋತ್ಸವದ ಅಂಗವಾಗಿ ಶಾಲೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಶಿಕ್ಷಕರೋರ್ವರು ರಸ್ತೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದ ಕಿನ್ನಾಳ ರಸ್ತೆಯಲ್ಲಿ ನಡೆದಿದೆ. ನಾಗಪ್ಪ ಏಳುಭಾವಿ (50) ಹೃದಯಾಘಾತದಿಂದ ಮೃತಪಟ್ಟ ಶಿಕ್ಷಕ. ನಾಗಪ್ಪ ಅವರು ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಾಗಿದ್ದು, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು ಇಂದು ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಡೆದುಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.