ಚಿಕ್ಕಮಗಳೂರಲ್ಲಿ ಅರ್ಥಪೂರ್ಣ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ

946

ಚಿಕ್ಕಮಗಳೂರು : ಜಿಲ್ಲಾಡಳಿತದ ವತಿಯಿಂದ ಕನಕದಾಸ ಜಯಂತಿಯನ್ನು ನವಂಬರ್ ೬ ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಕನಕದಾಸ ಜಯಂತಿ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಅವರ ಅಧ್ಯಕ್ಷತೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘ ಸಂಸ್ಥೆಯ ಮುಖಂಡರು ಹಾಗೂ ಕುರುಬರ ಸಮಾಜದ ಮುಖಂಡರೊಂದಿಗೆ ಚರ್ಚಿಸಲಾಯಿತು.

ಕನಕದಾಸರು ಈ ರಾಜ್ಯ ಕಂಡ ಶ್ರೇಷ್ಠ ದಾಸರು ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ, ಸಮಾಜದಲ್ಲಿ ಸಮಾನತೆಯನ್ನು ಬೋಧಿಸಿದ ಕನಕದಾಸರ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವು ಆಚರಿಸಲಾಗುವುದು. ಈ ಸಂಬಂಧ ಎಲ್ಲಾ ಸಿದ್ದತೆಗಳ ಕುರಿತು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ನವಂಬರ್ ೦೬ ರಂದು ಕುವೆಂಪು ಕಲಾಮಂದಿರದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೂ ಮುನ್ನ ಬೆಳಿಗ್ಗೆ ೧೦ ಗಂಟೆಗೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ನಗರದ ತಾಲ್ಲೂಕು ಕಚೇರಿಯಿಂದ ಕನಕದಾಸರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಗುವುದು. ಸಭಾ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಎಲ್ಲಾ ಜನಪ್ರತಿನಿಧಿಗಳು, ಗಣ್ಯರನ್ನು ಆಹ್ವಾನಿಸಲಾಗುವುದು ಹಾಗೂ ಕನಕದಾಸರ ಕುರಿತಂತೆ ತಜ್ಞರಿಂದ ಉಪನ್ಯಾಸ ಏರ್ಪಡಿಸಲಾಗುವುದು ಎಂದರು.

ಕನಕದಾಸರ ಜಯಂತಿಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಅರಣ್ಯ ವಸತಿ ಹಾಗೂ ವಿಹಾರ ಧಾಮಗಳ ಸಂಸ್ಥೆಯ ಅಧ್ಯಕ್ಷ ಎ.ಎನ್. ಮಹೇಶ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಜಿಲ್ಲಾ ಕುರುಬರ ಸಮಾಜದ ಅಧ್ಯಕ್ಷ ಕೆ.ಎಂ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ||ಸಿ.ರಮೇಶ್, ಮುಖಂಡರಾದ ಶಾಂತೇಗೌಡ, ಸತೀಶ್, ಮಾಜಿ ತಾ.ಪಂ. ಅಧ್ಯಕ್ಷ , ಕನಕ ಸೇನೆ ಅಧ್ಯಕ್ಷ ಪುಷ್ಪರಾಜ್, ದಲಿತ ಮುಖಂಡ ಕೆ.ಟಿ. ರಾಧಕೃಷ್ಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here