ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಆಧಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಮಧ್ಯಾಹ್ನ 12.30 ಕ್ಕೆ ಸಕಲ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು.
ದೇವಾಲಯದ ಬಾಗಿಲು ತೆರೆಯುತ್ತಿದಂತೆಯೇ ನೆರೆದಿದ್ದ ಜನರು ಅಮ್ಮನವರಿಗೆ ಜಯಘೋಷ ಹಾಕುತ್ತ ಧನ್ಯತಾ ಭಾವ ವ್ಯಕ್ತಪಡಿಸಿದರಲ್ಲದೆ, ದೇವರ ದರ್ಶನ ಪಡೆದು ಪುನೀತರಾದೆವು ಎಂಬ ಮನೋಬಾವದೊಂದಿಗೆ ತೆರೆಳುತ್ತಿದ್ದ ದೃಶ್ಯ ಕಂಡು ಬಂತು. ಮೊದಲ ದಿನ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲದಿದ್ದರು ಸಹ ಜನಸಾಗರವೇ ಹರಿದು ಬಂದಿತು.
ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ. ಮಂಜು, ವಿಧಾನ ಪರಿಷತ್ ಸದಸ್ಯರಾದ ಗೋಪಾಲಸ್ವಾಮಿ, ಜಿಲ್ಲಾ ಪಂಚಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣಕುಮಾರ್, ನಗರ ಸಭೆಯ ಅಧ್ಯಕ್ಷರಾದ ಡಾ:ಹೆಚ್.ಎಸ್.ಅನಿಲ್ ಕುಮಾರ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್, ಅಪರ ಜಿಲ್ಲಾಧಿಕಾರಿ ಪೂರ್ಣಿಮ, ಉಪ ವಿಭಾಗಾಧಿಕಾರಿ ಡಾ:ಹೆಚ್.ಎಲ್ ನಾಗರಾಜ್ ಮತ್ತಿತರರು ಹಾಜರಿದ್ದರು.