ಚಾಲಕನ ನಿಯಂತ್ರಣ ತಪ್ಪಿ ಎಣ್ಣೆ ಟ್ಯಾಂಕರ್ ಪಲ್ಟಿ, ಚಾಲಕ ಸಾವು…

215
firstsuddi

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಸೋಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸೋರಿಕೆಯಾದ ಸೊಯಾಬಿನ್ ಎಣ್ಣೆಯನ್ನು ತುಂಬಿಸಿಕೊಳ್ಳಲು ಸ್ಥಳೀಯರು ಮುಗಿಬಿದ್ದಿದ್ದು,  ಬಾಟಲಿ, ಬಿಂದಿಗೆ, ಬಕೆಟ್‌ನಲ್ಲಿ ಎಣ್ಣೆ ತುಂಬಿಸಿಕೊಂಡು ಹೋಗಿದ್ದಾರೆ.  ಚಡಚಣ ಠಾಣೆ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.