ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆ ಟ್ವೀಟ್ ಮಾಡಿದ್ದು, ಅತ್ಯಂತ ಉನ್ನತ ಧ್ಯೇಯೋದ್ಧೇಶ ಹೊಂದಿದ ಸಂವಿಧಾನ ರಚಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟವರು ಡಾ ಬಿ ಆರ್ ಅಂಬೇಡ್ಕರ್ ಅವರು. ಅವರ ಆಶಯಗಳನ್ನು ಸಾಕಾರಗೊಳಿಸಲು ಯತ್ನಿಸುವುದೇ ನಾವು ಅವರಿಗೆ ಸಲ್ಲಿಸಬಹುದಾದ ನಿಜವಾದ ಗೌರವ ಎಂದು ಟ್ವೀಟ್ ಮಾಡಿದ್ದಾರೆ.










